Saturday, December 14, 2024
HomeUncategorizedರಾಜ್ಯಮಟ್ಟದ ಚೆಸ್‌ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಧನುಷ್ ರಾಮ್‌ ಎಸ್.ಜಿ.ಎಫ್.ಐ ರಾಷ್ಟ್ರ ಮಟ್ಟಕ್ಕೆ...

ರಾಜ್ಯಮಟ್ಟದ ಚೆಸ್‌ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಧನುಷ್ ರಾಮ್‌ ಎಸ್.ಜಿ.ಎಫ್.ಐ ರಾಷ್ಟ್ರ ಮಟ್ಟಕ್ಕೆ ಆಯ್ಕೆ.


ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ರಾಜ್ಯಮಟ್ಟದ ಚೆಸ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಧನುಷ್ ರಾಮ್‌ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಎರಡನೇ ಬಾರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಇವರು ಕೊಲ್ಕತ್ತದಲ್ಲಿ ನಡೆಯಲಿರುವ ಸ್ಕೂಲ್‌ ಗೇಮ್ಸ್‌ ಫೆಡರೇಶನ್‌ ಓಫ್‌ ಇಂಡಿಯಾ(SGFI) ನಡೆಸುವ ರಾಷ್ಟ್ರ ಮಟ್ಟದ ಚೆಸ್‌ ಸ್ಪರ್ಧೆಗೆ ಕರ್ನಾಟಕ ತಂಡದ ನಾಯಕನಾಗಿ ಆಯ್ಕೆಯಾಗಿರುತ್ತಾರೆ. ಇವರು ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

RELATED ARTICLES
- Advertisment -
Google search engine

Most Popular