ಮೂಡುಬಿದಿರೆ : ಜುಲೈ 1 ರಂದು ಪತ್ರಿಕಾ ದಿನಾಚರಣೆ

0
49

ಮೂಡುಬಿದಿರೆ : ಮೂಡುಬಿದಿರೆ ಪ್ರೆಸ್‌ಕ್ಲಬ್ (ರಿ.) ಹಾಗೂ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಸಹಭಾಗಿತ್ವದಲ್ಲಿ ಜುಲೈ 1ರಂದು ಮಧ್ಯಾಹ್ನ 3 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡುಬಿದಿರೆ ಪ್ರೆಸ್‌ಕ್ಲಬ್ (ರಿ.) ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ ವಹಿಸಲಿದ್ದು, ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರು ಹಾಗೂ ಸಮಾಜ ಮಂದಿರ ಸಭಾ (ರಿ.) ಅಧ್ಯಕ್ಷ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನವೀನ್ ಸಾಲ್ಯಾನ್ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಟಿವಿ9 ಮಡಿಕೇರಿ ವಿಡಿಯೋ ಜರ್ನಲಿಸ್ಟ್ ನವೀನ್ ಸುವರ್ಣ ಅವರಿಗೆ ‘ಪ್ರೆಸ್ ಕ್ಲಬ್ ಗೌರವ’ ನೀಡಿ ಸನ್ಮಾನಿಸಲಾಗುವುದು. ಅಲ್ಲದೆ, ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಸನ್ಮತ್ ಎಸ್. ಆಚಾರ್ಯ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಅಮೋಫ್ ಹೆಗ್ಡೆ ಅವರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು.

ಕಾರ್ಯಕ್ರಮದಲ್ಲಿ ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆಕಟ್ಟೆ ಪ್ರಾಯೋಜಿತ ದತ್ತಿನಿಧಿ ಉಪನ್ಯಾಸ ನಡೆಯಲಿದ್ದು, ಖ್ಯಾತ ಎಐ ಮತ್ತು ಸೈಬರ್ ಭದ್ರತಾ ತಜ್ಞರು ಹಾಗೂ ಲೇಖಕರಾದ ಡಾ. ಅನಂತ್ ಪ್ರಭು ಜಿ. ಅವರು “ಎಐ ಮೂಲಕ ಪತ್ರಕರ್ತರಿಗಿರುವ ಅವಕಾಶಗಳು ಮತ್ತು ಸವಾಲುಗಳು” ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸರ್ವರಿಗೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here