ಮಂಗಳೂರಿನಲ್ಲಿ 1843 ಜುಲೈ 1 ರಂದು ಮಂಗಳೂರು ಸಮಾಚಾರ ಎಂಬ ಕನ್ನಡ ಪ್ರಥಮ ಪತ್ರಿಕೆಯು ಪ್ರಾರಂಭಗೊಂಡಿತ್ತು.ಈ ದಿನ ಕೇರಳ -ಕರ್ನಾಟಕ ಮಹಾರಾಷ್ಟ್ರ ರಾಜ್ಯದಾದ್ಯಂತ ಕನ್ನಡ ಪತ್ರಿಕೋದ್ಯಮ (ಪತ್ರಿಕಾ) ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.
ಮಂಗಳೂರಿನಲ್ಲಿ ಕರ್ನಾಟಕ ಪತ್ರಿಕಾ ಅಕಾಡೆಮಿಯ ಆಶ್ರಯದಲ್ಲಿ ನಡೆದ ಕನ್ನಡ ಪತ್ರಿಕೋದ್ಯಮದ 142 ನೇ ವರ್ಷಾಚರಣೆಯ ಸಂದರ್ಭದಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯವ್ಯಾಪ್ತಿಯನ್ನು ಒಳಗೊಂಡು ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಫ್ರೀಲಾನ್ಸ್ ಪತ್ರಕರ್ತ ಶಿವರಾಮ ಕಾಸರಗೋಡು ಸಂಸ್ಥಾಪಕ ಅಧ್ಯಕ್ಷರಾಗಿ 1985 ಜುಲೈ 1ರಂದು ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ) ಫ್ರೀಲಾನ್ಸ್ ಪತ್ರಕರ್ತರ ಸಂಘವನ್ನು ಅಂದಿನ ಕರ್ನಾಟಕ ಪತ್ರಿಕಾ ಅಕಾಡೆಮಿ ಅಧ್ಯಕ್ಷ ಜಿ.ನಾರಾಯಣ ಬೆಂಗಳೂರು ಉದ್ಘಾಟಿಸಿದರು.
ಈ ವರ್ಷ ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ಜುಲೈ 1 ಬುಧವಾರದಂದು ಸಂಜೆ ಗಂಟೆ 4.00 ಕ್ಕೆ ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ) ಫ್ರೀಲಾನ್ಸ್ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ ಕಾಸರಗೋಡು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಬೆಂಗಳೂರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 183 ನೇ ವರ್ಷದ ರಾಜ್ಯಮಟ್ಟದ ಕನ್ನಡ ಪತ್ರಿಕೋದ್ಯಮ (ಪತ್ರಿಕಾ) ದಿನಾಚರಣೆ,ಕನ್ನಡ ಪತ್ರಿಕಾ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ, ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಿಕೋದ್ಯಮ ನಡೆದು ಬಂದ ದಾರಿ- ವಿಶೇಷೋಪನ್ಯಾಸ, ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಿಕಾ ವಿತರಕರಿಗೆ ಸನ್ಮಾನ,ನೂತನವಾಗಿ ಆಯ್ಕೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರಿಗೆ ಅಭಿನಂದನೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಶ್ರೀಕಾಂತ ಕಾಸರಗೋಡು ಅವರಿಗೆ ಅಭಿನಂದನೆ, ಕಾಸರಗೋಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕಟವಾಗುವ ಕನ್ನಡ ದಿನ ಪತ್ರಿಕೆಗಳ ಪ್ರದರ್ಶನವನ್ನು ಏರ್ಪಡಿಸಿ, ಕನ್ನಡ ಪತ್ರಿಕಾ ಪ್ರತಿಜ್ಞೆಯನ್ನು ಕೈಗೊಳ್ಳಲಾಗುವುದು.
ಕಾಸರಗೋಡು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಜಿಲ್ಲಾ ಪತ್ರಿಕೆಗಳಿಗೆ ಕಾರ್ಯನಿರತ ಪತ್ರಕರ್ತರಾಗಿ ಫ್ರೀಲಾನ್ಸ್ ಪತ್ರಕರ್ತರಾಗಿ, ಹವ್ಯಾಸಿ ಪತ್ರಕರ್ತರಾಗಿ ಅರೆಕಾಲಿಕ ವರದಿಗಾರನಾಗಿ, ನಿರಂತರವಾಗಿ ಪತ್ರಿಕಾ ಬರಹದ ಮೂಲಕ ಗುರುತಿಸಿಕೊಳ್ಳುವವರು ಹಾಗೂ ವಿವಿಧ ಸುದ್ದಿ ವಾಹಿನಿಗಳು, ಪತ್ರಿಕಾ ದೃಶ್ಯ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಫ್ರೀಲಾನ್ಸ್ ಪತ್ರಕರ್ತರು, ಮಾಧ್ಯಮ ಮಿತ್ರರು ಭಾಗವಹಿಸಲಿದ್ದಾರೆ. ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಿಕೆಗಳಿಗೆ
ಪತ್ರಿಕಾ ವರದಿ, ಸುದ್ದಿಯನ್ನು ಕಳುಹಿಸುವ ಕುರಿತು ಪತ್ರಿಕಾ ಬರವಣಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು, ಸಂಘಸಂಸ್ಥೆಗಳು, ಶಾಲಾ ಕಾಲೇಜುಗಳ ಆಧ್ಯಾಪಕರು, ವಿದ್ಯಾರ್ಥಿಗಳು, ಮಾಧ್ಯಮ ವಕ್ತಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ವಿನಂತಿಸಲಾಗಿದೆ.
