ಜು.1ರಂದು ಕಾಸರಗೋಡಿನಲ್ಲಿ ರಾಜ್ಯ ಮಟ್ಟದ ಕನ್ನಡ ಪತ್ರಿಕಾ ದಿನಾಚರಣೆ ಹಾಗೂ ಮಾಧ್ಯಮ ಪ್ರಶಸ್ತಿ ಪ್ರದಾನ

0
14

ಕಾಸರಗೋಡು : ಕನ್ನಡದ ಪ್ರಥಮ ಪತ್ರಿಕೆ ಮಂಗಳೂರು ಸಮಾಚಾರ’ 1843ರ ಜುಲೈ 1ರಂದು ಪ್ರಕಟವಾದ ಸ್ಮರಣಾರ್ಥ ಕನ್ನಡ ಪತ್ರಿಕೋದ್ಯಮದ 183ನೇ ವರ್ಷಾಚರಣೆ ಅಂಗವಾಗಿ ರಾಜ್ಯ ಮಟ್ಟದ ಕನ್ನಡ ಪತ್ರಿಕಾ ದಿನಾಚರಣೆ ಹಾಗೂ ಕನ್ನಡ ಪತ್ರಿಕಾ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 1ರಂದು ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನಡೆಯಲಿದೆ.

ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ) ಫ್ರೀಲಾನ್ಸ್ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗ ನೀಡಿದ್ದು, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಕೇರಳ ರಾಜ್ಯ ಘಟಕ ಸಹಕಾರ ನೀಡಲಿವೆ.

ಕಾರ್ಯಕ್ರಮವು ಜುಲೈ 1 (ಬುಧವಾರ) ಸಂಜೆ 4.00ರಿಂದ 5.00 ಗಂಟೆಯವರೆಗೆ ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ, ಕಾಸರಗೋಡುದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರು, ಸಾಹಿತಿಗಳು, ಗಣ್ಯರು, ಪತ್ರಿಕಾ ಕ್ಷೇತ್ರದ ಪ್ರತಿನಿಧಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದು, ಕನ್ನಡ ಪತ್ರಿಕೋದ್ಯಮಕ್ಕೆ ಸೇವೆ ಸಲ್ಲಿಸಿದ ಸಾಧಕರನ್ನು ಕನ್ನಡ ಪತ್ರಿಕಾ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಸಂಘದ ಪದಾಧಿಕಾರಿಗಳು, ಪತ್ರಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here