ಬ್ರಹ್ಮಾವರ : ನವಕಿರಣ್ ನವತಾರೆ ಸೇವಾ ವೇದಿಕೆ, ಬ್ರಹ್ಮಾವರ ಇವರ ಆಶ್ರಯದಲ್ಲಿ 32ನೇ ವರ್ಷದ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯನ್ನು ಸೆಪ್ಟೆಂಬರ್ 6ರಂದು ಭಾನುವಾರ ಆಯೋಜಿಸಲಾಗಿದೆ.
10 ವರ್ಷದೊಳಗಿನ ಎಲ್ಲಾ ಮಕ್ಕಳಿಗಾಗಿ ಸ್ಪರ್ಧೆಯನ್ನು ಮೂರು ವಿಭಾಗಗಳಲ್ಲಿ ನಡೆಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತರು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಆಯೋಜಕರು ತಿಳಿಸಿದ್ದಾರೆ.
ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಮೇಕಪ್ ಹಾಗೂ ವೇಷಭೂಷಣದ ಅಗತ್ಯವಿದ್ದಲ್ಲಿ ಸೆಪ್ಟೆಂಬರ್ 4ರೊಳಗೆ ಆಯೋಜಕರಿಗೆ ತಿಳಿಸಬೇಕು. ಹೆಚ್ಚಿನ ಮಾಹಿತಿಗಾಗಿ 9742645526 ಅಥವಾ 9449933526 ಸಂಖ್ಯೆಯನ್ನು ಸಂಪರ್ಕಿಸಬಹುದು.

