ಕನ್ನಡ ಸಾಹಿತ್ಯದ ಮೂಲಕ ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಮಹತ್ವದ ಉದ್ದೇಶದಿಂದ ಕರ್ನಾಟಕ ಆರೋಗ್ಯ ಸಾಹಿತ್ಯ ಪರಿಷತ್ ವತಿಯಿಂದ “ಆರೋಗ್ಯ ಜಾಗೃತಿಗಾಗಿ ರಾಜ್ಯ ಮಟ್ಟದ ಕವನ ಮತ್ತು ಕಥಾ ಸ್ಪರ್ಧೆ – 2026” ಅನ್ನು ಆಯೋಜಿಸಲಾಗಿದೆ.
“ವೈದ್ಯಲೋಕ” ಆರೋಗ್ಯ ಮಾಸ ಪತ್ರಿಕೆ ಮತ್ತು ಮೀಡಿಯಾ ಐಕಾನ್ ಸಂಸ್ಥೆಗಳು ಈ ಸ್ಪರ್ಧೆಗೆ ಸಹಯೋಗ ನೀಡುತ್ತಿವೆ.
ಸ್ಪರ್ಧೆಯ ಉದ್ದೇಶ:
ಬರವಣಿಗೆಯ ಮೂಲಕ ಆರೋಗ್ಯ ಮತ್ತು ಸ್ವಾಸ್ಥ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಧ್ವನಿಯಾಗುವುದು. ನಿಮ್ಮ ಪದಗಳು ಆರೋಗ್ಯಕರ ಭವಿಷ್ಯಕ್ಕೆ ಪ್ರೇರಣೆಯಾಗಲಿ ಎಂಬುದು ಪರಿಷತ್ತಿನ ಆಶಯ.
3 ವಿಭಾಗಗಳಲ್ಲಿ ಸ್ಪರ್ಧೆ:
- ಸಾರ್ವಜನಿಕರು
- ವೈದ್ಯರು ಮತ್ತು ಆರೋಗ್ಯ ವೃತ್ತಿಪರರು
- ವೈದ್ಯಕೀಯ ವಿದ್ಯಾರ್ಥಿಗಳು
ಏಕೆ ಭಾಗವಹಿಸಬೇಕು?
- ನಿಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ಸುವರ್ಣ ಅವಕಾಶ
- ಸಾಹಿತ್ಯದ ಮೂಲಕ ಆರೋಗ್ಯ ಜಾಗೃತಿ ಹರಡಲು ವೇದಿಕೆ
- ಆಯ್ದ ಬರಹಗಳು ‘ವೈದ್ಯಲೋಕ’ ಮಾಸಪತ್ರಿಕೆ ಹಾಗೂ ವೆಬ್‌ಸೈಟ್‌ನಲ್ಲಿ ಪ್ರಕಟ
- ಆರೋಗ್ಯ ವಿಷಯ ಲೇಖಕರಾಗಿ ಗುರುತಿಸಿಕೊಳ್ಳುವ ಅವಕಾಶ
- ವಿಜೇತರಿಗೆ ಪ್ರಶಸ್ತಿ, ಬಹುಮಾನ ಮತ್ತು ಪ್ರಮಾಣಪತ್ರ
ಪ್ರಮುಖ ದಿನಾಂಕ:
ಕಥೆ ಮತ್ತು ಕವನ ಕಳುಹಿಸಲು ಕೊನೆಯ ದಿನಾಂಕ: ಜೂನ್ 30, 2026
ಬರಹಗಳನ್ನು ಕಳುಹಿಸಬೇಕಾದ ವಿಳಾಸ:
ಇಮೇಲ್: mediaicon@ymail.com
ವಾಟ್ಸಪ್: 81975 54373
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಶ್ರೀ ಕೃಷ್ಣ ಎಂ: 81975 54373
ಎನ್.ವಿ. ರಮೇಶ್: 98455 65238

