Sunday, July 14, 2024
Homeಅಪರಾಧಶಾಸಕ ಪ್ರದೀಪ್‌ ಈಶ್ವರ್‌ ಮನೆ ಮೇಲೆ ಕಲ್ಲು ತೂರಾಟ

ಶಾಸಕ ಪ್ರದೀಪ್‌ ಈಶ್ವರ್‌ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್‌ ಈಶ್ವರ್‌ ಅವರ ಚಿಕ್ಕಬಳ್ಳಾಪುರದ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆ ವರದಿಯಾಗಿದೆ. ನಗರದ ಕಂದವಾರದಲ್ಲಿರುವ ಶಾಸಕರ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದೆ. ಮನೆಯ ಹಿಂಭಾಗದ ಕಿಟಕಿ ಗಾಜು ಪುಡಿಪುಡಿಯಾಗಿದೆ. ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಾಗಿರುವ ಪ್ರದೀಪ್‌ ಈಶ್ವರ್‌ ಇಲ್ಲಿನ ಮಾಜಿ ಶಾಸಕ ಡಾ. ಕೆ. ಸುಧಾಕರ್‌ ವಿರುದ್ಧ ಗೆದ್ದಿದ್ದರು. ಸುಧಾಕರ್‌ ವಿರುದ್ಧ ಪ್ರದೀಪ್‌ ಈಶ್ವರ್‌ ಸಾಕಷ್ಟು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ನಿನ್ನೆ ನಡೆದ ಮತ ಎಣಿಕೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಡಾ. ಕೆ. ಸುಧಾಕರ್‌ ವಿಜಯಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular