ಕೊಲ್ಕತಾ: ರಾಮನವಮಿ ಮೆರವಣಿಗೆ ವೇಳೆ ಸಂಭವಿಸಿದ ಕಲ್ಲುತೂರಾಟದಿಂದಾಗಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನ ರೆಜಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ರಾಮನವಮಿಯ ಹಿನ್ನೆಲೆಯಲ್ಲಿ ಬುಧವಾರ ಮೆರವಣಿಗೆ ಆಯೋಜಿಸಲಾಗಿತ್ತು, ಈ ವೇಳೆ ಮೆರವಣಿಗೆ ನಡೆಸುತ್ತಿದ್ದವರ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮಹಿಳೆಯನ್ನು ಮುರ್ಷಿದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.