ಬೆಂಗಳೂರು: ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಕ್ಯಾಂಪಸ್‌ನಲ್ಲಿ ಇಂದು ಮುಂಜಾನೆ 60 ವರ್ಷದ ಮಹಿಳೆ ವಾಕಿಂಗ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಬೀದಿ ನಾಯಿಗಳು ಮಹಿಳೆಯ ಮೇಲೆ ಭೀಕರ ದಾಳಿ ಮಾಡಿವೆ. ಇದರಿಂದ ಮಹಿಳೆಯ ತಲೆ ಭಾಗ, ಮುಖ, ಕೈ, ಕತ್ತಿನ ಭಾಗ ಛಿದ್ರಛಿದ್ರಗೊಂಡಿದೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯ ಅಳಿಯ ಏರ್ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಳಿಯ-ಮಗಳನ್ನು ಭೇಟಿಯಾಗಲು ಬಿಹಾರದಿಂದ ಬೆಂಗಳೂರಿಗೆ ಮಹಿಳೆ ಬಂದಿದ್ದರು. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಹಿಂದೆಯೂ ಬೀದಿ ನಾಯಿಗಳು ನಾಲ್ಕೈದು ಜನರ ಮೇಲೆ ದಾಳಿ ನಡೆಸಿರುವ ಘಟನೆಗಳು ನಡೆದಿವೆ ಎನ್ನಲಾಗಿದೆ.