ಅಜಕಾರು ವಲಯದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ

0
3

ಹೆಬ್ರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಹೆಬ್ರಿ ತಾಲೂಕಿನ ಅಜಕಾರು ವಲಯದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ ಪಂಚಗಂಗಾವಳಿ ಜ್ಞಾನ ವಿಕಾಸ ಕೇಂದ್ರ ಉಪ್ಪಿನಕುದ್ರು ಸದಸ್ಯರ ತಂಡದಿಂದ ಜರುಗಿತು.

ಕಾರ್ಯಕ್ರಮವನ್ನು ಮರ್ಣಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಂಕಿತಾರವರು ದೀಪ ಪ್ರಜ್ವಲಿಯ ಮೂಲಕ ಉದ್ಘಾಟಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಇಂತಹ ಜಾಗೃತಿ ಮೂಡಿಸುವ ಕಾರ್ಯಕ್ರಮ ಸಾರ್ವಜನಿಕರಿಗೆ ತುಂಬಾ ಅವಶ್ಯಕತೆ ಇದೆ, ಎಲ್ಲರೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ, ನೀರಿನ ಸದ್ಬಳಕೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ಸದಸ್ಯರಾಗಿರುವ ನಂದಕುಮಾರ್, ಅಜ ಕಾರು ವಲಯ ಅಧ್ಯಕ್ಷರು ಶಂಕರಾಚಾರ್ಯ, ಒಕ್ಕೂಟದ ಅಧ್ಯಕ್ಷರಾದ ಪ್ರವೀಣ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಚಂದ್ರವತಿ, ರೇಣುಕಾ ಮೇಲ್ವಿಚಾರಕರಾದ, ನಿಶ್ಮಿತಾ, ಸೇವಾ ಪ್ರತಿನಿಧಿ ವಿಜಯ ಕಾಮತ್ , ಜ್ಞಾನವಿಕಾಸದ ಸದಸ್ಯರು ಉಪಸ್ಥಿತರಿದ್ದರು.

ಸಾರ್ವಜನಿಕರಿಗೆ ಶಿಕ್ಷಣ, ಆರೋಗ್ಯ, ಸ್ವಚ್ಛತೆ, ಮೂಡನಂಬಿಕೆ, ಪ್ಲಾಸ್ಟಿಕ್ ಬಳಕೆ ಇತ್ಯಾದಿ ವಿಷಯಗಳ ಕುರಿತು ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

LEAVE A REPLY

Please enter your comment!
Please enter your name here