ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮ: ಮುಂದಿನ ವರ್ಷದಿಂದ ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಬ್ರೇಕ್!

0
105

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಜನರನ್ನು ಮಾಲಿನ್ಯ ಸಮಸ್ಯೆಯಿಂದ ಮುಕ್ತಗೊಳಿಸಲು ದೆಹಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ವರ್ಷದಿಂದ ಎಲೆಕ್ಟ್ರಿಕ್ ವಾಹನಗಳ ನೋಂದಣಿಗೆ ಮಾತ್ರ ಅವಕಾಶ ನೀಡುವುದಾಗಿ ಘೋಷಿಸಿದೆ. ಎಲೆಕ್ಟ್ರಿಕ್ ವಾಹನ ನೀತಿ 2026 -2030 ಕರಡನ್ನು ದೆಹಲಿ ಸರ್ಕಾರ ಬಿಡುಗಡೆ ಮಾಡಿದ್ದು, ಹೊಸ ರೀತಿಯ ಪ್ರಕಾರ, 2027ರ ಜನವರಿಯಿಂದ ಹೊಸದಾಗಿ ನೋಂದಣಿಯಾಗುವ ಎಲ್ಲಾ ತ್ರಿಚಕ್ರ ವಾಹನಗಳು ಕೇವಲ ಎಲೆಕ್ಟ್ರಿಕ್ ಆಗಿರಬೇಕು.

2028ರ ಏಪ್ರಿಲ್ 1ರಿಂದ ಎಲೆಕ್ಟ್ರಿಕ್ ಮಾದರಿ ದ್ವಿಚಕ್ರ ವಾಹನಗಳ ನೋಂದಣಿಗೆ ಮಾತ್ರ ಅವಕಾಶ ನೀಡಲಾಗುವುದು. ವಾಣಿಜ್ಯ ಬಳಕೆಯ ವಾಹನಗಳನ್ನು ಹಂತ ಹಂತವಾಗಿ ಎಲೆಕ್ಟ್ರಿಕ್ ಪರಿವರ್ತನೆ ಅಥವಾ ಹೊಸ ಖರೀದಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಶಾಲಾ ಬಸ್ ಅಥವಾ ವಾಹನಗಳನ್ನು ಹಂತ ಹಂತವಾಗಿ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವ ಗುರಿ ಹೊಂದಲಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಬ್ಯಾಟರಿ ಸಾಮರ್ಥ್ಯದ ಆಧಾರದ ಮೇಲೆ 2.25 ಲಕ್ಷ ರೂಪಾಯಿವರೆಗೂ ಸಬ್ಸಿಡಿ ನೀಡಲಾಗುವುದು. ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ರೋತ್ಸಾಹ ನೀಡಲು ಚಾರ್ಜಿಂಗ್ ಸೌಕರ್ಯಗಳನ್ನು ವಿಸ್ತರಿಸಲು ಮಾರ್ಗಸೂಚಿ ಸಿದ್ಧಪಡಿಸಲಾಗಿದೆ.

LEAVE A REPLY

Please enter your comment!
Please enter your name here