‘ಸುರಕ್ಷತೆ ಮೊದಲು’ ಸಂದೇಶದೊಂದಿಗೆ ವಿದ್ಯಾರ್ಥಿ ಜಾಗೃತಿ

0
71

ಕಾರ್ಕಳ: ಸುತ್ತಮುತ್ತಲಿನ ಪರಿಸರದಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡ, ಪ್ರಕೃತಿ ವಿಕೋಪಗಳು ಮತ್ತು ಇತರೆ ದುರ್ಘಟನೆಗಳಿಂದ ಸ್ವಯಂ ರಕ್ಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು, ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ‘ಸುರಕ್ಷತೆ ಮೊದಲು’ ಜನಜಾಗೃತಿ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ವೃತ್ತಿಪರ ಅಗ್ನಿಶಾಮಕ ಮತ್ತು ಸುರಕ್ಷತಾ ಅಧಿಕಾರಿ ಶ್ರೀ ಸತ್ಯರಾಜ್ ಅವರು ಆಗಮಿಸಿದ್ದರು. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸುರಕ್ಷತಾ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಸಹ-ಸಂಸ್ಥಾಪಕರು, ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಭಾಷಾ ಉಪನ್ಯಾಸಕರಾದ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here