ಬೀದರ್ : ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.
16 ವರ್ಷದ ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಹತ್ತನೇ ತರಗತಿಯಲ್ಲಿ ಮದಿಯಾ ವ್ಯಾಸಂಗ ಮಾಡುತ್ತಿದ್ದಳು. ಲವ್ ಮಾಡುವಂತೆ ಸಹಪಾರಿ ಒತ್ತಾಯಿಸಿದ್ದಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

