ಬೆಂಗಳೂರು: ಹಾಸ್ಟೆಲ್ ವಿದ್ಯಾರ್ಥಿ ಕಟ್ಟಡದಿಂದ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ನಾಗದೇನಹಳ್ಳಿಯ ಗೀತಂ ವಿವಿಯಲ್ಲಿ ಘಟನೆ ನಡೆದಿದೆ.
ಆಂಧ್ರ ಪ್ರದೇಶ ಕರ್ನೂಲು ಮೂಲದ ದಾಸರಿ ಬ್ರಹ್ಮ ಸಾಯಿರೆಡ್ಡಿ ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ.
ಗೀತಂ ವಿವಿಯ ಹಾಸ್ಟೆಲ್ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನವೆಂಬರ್ ನಲ್ಲಿ ವಿದೇಶಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದರು. ಫೆಬ್ರವರಿ ತಿಂಗಳಲ್ಲಿ ರೈಲುಗೆ ಸಿಲುಕಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದರು. ಇದೀಗ ಹಾಸ್ಟೆಲ್ ನಿಂದ ಬಿದ್ದು ಸಾಯಿರೆಡ್ಡಿ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.