ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

0
152

ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಜಿಮ್​ನಲ್ಲಿ, ಮದುವೆ ಸಮಾರಂಭಗಳಲ್ಲಿ ನೃತ್ಯ ಮಾಡುತ್ತಿದ್ದವರು ಹೀಗೆ ಹತ್ತು ಹಲವು ಪ್ರಕರಣಗಳು ನಮ್ಮ ಕಣ್ಣಮುಂದಿವೆ. ಕೋನಸೀಮಾದಲ್ಲಿ ತರಗತಿಯಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ನಲ್ಲಮಿಲ್ಲಿ ಸಿರಿ ಎಂಬ ವಿದ್ಯಾರ್ಥಿನಿ ತರಗತಿಯಲ್ಲಿ ಹೃದಯಾಘಾತಕ್ಕೊಳಗಾಗಿದ್ದಾರೆ. ಆಘಾತಕಾರಿ ಘಟನೆ ತರಗತಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶನಿವಾರ ಬೆಳಗ್ಗೆ 9.45 ರ ಸುಮಾರಿಗೆ ಈ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here