ವಿದ್ಯಾರ್ಥಿ ವೇದಿಕೆ ಉದ್ಘಾಟನಾ ಸಮಾರಂಭ – ಪ್ರತಿಭಾ ದಿನಾಚರಣೆ; ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

0
13

ಕಾಪು : ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕಾಪು ಇಲ್ಲಿ ಇಂದು ದಿನಾಂಕ 13-09-2025 ರಂದು ನಡೆದ ವಿದ್ಯಾರ್ಥಿ ವೇದಿಕೆ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಶಾಸಕರು ಮಾತನಾಡಿ, ಹಿಂದೆ ಗುರುಕುಲ ಶಿಕ್ಷಣ ಪದ್ದತಿ ಇತ್ತು ಆಗ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ನಮ್ಮ ಕಲೆ ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಮಕ್ಕಳಿಗೆ ತಿಳಿಸುವ ಪ್ರಯತ್ನ ನಡೆಯುತ್ತಿತ್ತು ಎಂದು ಹೇಳಿದ ಅವರು ಸ್ಕೂಲ್ ಇಸ್ ಟೆಂಪಲ್ ಆಫ್ ಲರ್ನಿಂಗ್ ಪ್ರತಿ ಮಗುವು ಭಿನ್ನ ಆ ಮಗುವಿನ ಕಲಿಕೆಯು ಭಿನ್ನ ಎಂದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಪುರಸಭೆ ಸದಸ್ಯರಾದ ನಾಗೇಶ್, ಕಾಲೇಜು ಪ್ರಾಂಶುಪಾಲರಾದ ಗೋಪಾಲಕೃಷ್ಣ ಗಾಂವಕರ್, ಉಪನ್ಯಾಸಕರಾದ ದೀಪಿಕಾ ಸುವರ್ಣ, ಅತಿಥಿಗಳಾದ ನರೇಂದ್ರ ರೈ, ರಾಘವೇಂದ್ರ ನಾಯಕ್ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here