ಚಿತ್ರದುರ್ಗ: ನವೋದಯ ಶಾಲೆಯೊಂದರ 8ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲೆಯಲ್ಲೇ ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ. ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಪ್ರೇಮ್ ಸಾಗರ್ (13) ನೇಣಿಗೆ ಶರಣಾದ ವಿದ್ಯಾರ್ಥಿ. ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ಪ್ರೇಮ್ ಸಾಗರ್, ಹಿರಿಯ ವಿದ್ಯಾರ್ಥಿಗಳು ರೇಗಿಸುತ್ತಿದ್ದರೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ.