ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ವತಿಯಿಂದ ಕನ್ನಡ ಸಂಗ್ರಾಮ, ಉದ್ಯೋಗ ಮತ್ತು ವೃತ್ತಿ ಸಮಾಲೋಚನೆ ವಿಭಾಗದ ಸಹಯೋಗದ ನಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಹೋಬಳಿಯ ಸಹಯೋಗದಲ್ಲಿ ಗುರುವಾರ 7 ರಂದು ವಿದ್ಯಾರ್ಥಿಗಳಿಗೆ ತಮ್ಮ ಮುಂಬರುವ ಪರೀಕ್ಷೆಗಳ ಅನುಕೂಲಕ್ಕಾಗಿ ವಿದ್ಯಾರ್ಥಿ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಹಂಪನಕಟ್ಟೆಯ ಶಿವರಾಮ ಕಾರಂತ ಸಭಾ ಭವನದಲ್ಲಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಕೆಎಎಸ್ ರಾಜು ಮೊಗವೀರ ಉದ್ಘಾಟಿಸಲಿದ್ದಾರೆ.
ದ.ಕ. ಕಸಾಪ ಸಂಘಟನಾ ಕಾರ್ಯದರ್ಶಿ ಲಯನ್ ಚಂದ್ರಹಾಸ ಶೆಟ್ಟಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲ ಪ್ರಾಧ್ಯಾಪಕ ಗಣಪತಿ ಗೌಡ ಅಧ್ಯಕ್ಷತೆ ವಹಿಸುವರು.
ಸಂಪನ್ಮೂಲ ವ್ಯಕ್ತಿಯಾಗಿ ಕೊಡಗು ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಮಿಲನ ಕೆ ಭರತ್ ಆಗಿದ್ದಾರೆ.
ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಎಲ್ ಲಕ್ಷ್ಮೀ ದೇವಿ ಕಸಾಪ ಕೇಂದ್ರೀಯ ಕಾರ್ಯಕಾರಿ ಸಮಿತಿ ಬೆಂಗಳೂರು ಸದಸ್ಯ ಡಾ. ಮಾಧವ ಎಂ.ಕೆ, ಮಂಗಳೂರು ಘಟಕ ಕಸಾಪ ಅಧ್ಯಕ್ಷ ರೇಮಂಡ್ ಡಿಕುನ್ಹಾ ತಾಕೋಡೆ ಅವರೊಂದಿಗೆ ಸಂಘದ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಅರ್ಧ ದಿನದ ಈ ಕಾರ್ಯಕ್ರಮದಿಂದ ಸುಮಾರು ನೂರು ವಿಶ್ವವಿದ್ಯಾಲಯ ಕಾಲೇಜಿನ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ.