ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿನಿಗೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಸನ್ಮಾನ

0
28


ಮೂಡುಬಿದಿರೆ : 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ದಿಶಾ ಪೂಜಾರಿ ಅವರು ರಾಜ್ಯದಲ್ಲಿಯೇ 600ಕ್ಕೆ 600 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿರುವ ಹಿನ್ನೆಲೆಯಲ್ಲಿ, ಅವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.), ಮುಲ್ಕಿ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಗುತ್ತಿದೆ.
ಸನ್ಮಾನ ಕಾರ್ಯಕ್ರಮವು ಸೋಮವಾರ ಬೆಳಿಗ್ಗೆ 11.00 ಗಂಟೆಗೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವಾ ಅವರ ಕಚೇರಿಯಲ್ಲಿ, ಅವರ ಸಮ್ಮುಖದಲ್ಲಿ ನಡೆಯಲಿದೆ.
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.), ಮುಲ್ಕಿಯ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಅವರ ನೇತೃತ್ವದಲ್ಲಿ ವಿದ್ಯಾರ್ಥಿನಿಗೆ ನಗದು ಪುರಸ್ಕಾರ ಹಾಗೂ ಸನ್ಮಾನ ನೀಡಿ ಗೌರವಿಸಲಾಗುವುದು.
ಈ ವಿಷಯವನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.), ಮುಲ್ಕಿಯ ಪ್ರಧಾನ ಕಾರ್ಯದರ್ಶಿ ಜಯಾನಂದ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.