Wednesday, September 11, 2024
HomeUncategorizedಪೋಷಕರು ಶಿಕ್ಷಕರೊಂದಿಗೆ ಉತ್ತಮ ಸಹಕಾರ ಮತ್ತು ಬಾಂಧವ್ಯವನ್ನು ಬೆಳೆಸಿದಾಗ ಮಾತ್ರ ವಿದ್ಯಾರ್ಥಿಗಳು ಹಾಗೂ ಶಾಲೆಗಳು ಅಭಿವೃದ್ಧಿ...

ಪೋಷಕರು ಶಿಕ್ಷಕರೊಂದಿಗೆ ಉತ್ತಮ ಸಹಕಾರ ಮತ್ತು ಬಾಂಧವ್ಯವನ್ನು ಬೆಳೆಸಿದಾಗ ಮಾತ್ರ ವಿದ್ಯಾರ್ಥಿಗಳು ಹಾಗೂ ಶಾಲೆಗಳು ಅಭಿವೃದ್ಧಿ ಹೊಂದಲು ಸಾಧ್ಯ,. ಅಬುಬಕ್ಕರ್ ಅಶ್ರಫ್ ಕಲ್ಲಡ್ಕ

ಬಂಟ್ವಾಳ : ಪೋಷಕರು ಶಾಲೆಯ ಭೌತಿಕ ಅಭಿವೃದ್ಧಿ ಮತ್ತು ಶೈಕ್ಷಣಿಕ ಬೆಳವಣಿಗೆಯಲ್ಲಿ ಮುಖ್ಯ ಪಾತ್ರರಾಗಿರುತ್ತಾರೆ, ಕೇವಲ ಶಿಕ್ಷಕರು ವಿದ್ಯಾರ್ಥಿಗಳ ಬೆಳವಣಿಗೆಗೆ ಕಾರಣಕರ್ತ ಆಗಲಾರ ಜೊತೆಗೆ ಪೋಷಕರ ಉತ್ತಮ ಸಹಕಾರ ಮತ್ತು ಉತ್ತಮ ಬಾಂಧವ್ಯವನ್ನು ಬೆಳೆಸಿದಾಗ ಮಾತ್ರ ವಿದ್ಯಾರ್ಥಿಗಳು ಹಾಗೂ ಶಾಲೆಗಳು ಅಭಿವೃದ್ಧಿ ಹೊಂದಲು ಸಾಧ್ಯ, ಪ್ರತಿ ಶಾಲೆಗಳಲ್ಲಿ ಉತ್ತಮವಾದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ರಚನೆಗೊಂಡು ಎಲ್ಲಾ ರೀತಿಯ ಕೆಲಸಗಳನ್ನು ನಿರ್ವಹಿಸಿದಾಗ ಉತ್ತಮ ಫಲಿತಾಂಶ ದೊರಕುತ್ತದೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಆಯಾ ಶಾಲೆಗಳ ಭೌತಿಕ ಅಭಿವೃದ್ಧಿಗೆ ಪೂರಕವಾದ ಮೆಟ್ಟಲುಗಳಾಗಿವೆ ಹಾಗೂ ಉತ್ತಮ ಫಲಿತಾಂಶವನ್ನು ಹೊಂದುವಲ್ಲಿ ಸಫಲವಾಗಿದೆ ಎಂಬುದಾಗಿ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪದವೀಧರ ಮುಖ್ಯ ಶಿಕ್ಷಕ ಅಬುಬಕ್ಕರ್ ಅಶ್ರಫ್ ಹೇಳಿದರು.

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಮಜಿಯಲ್ಲಿ ನಡೆದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯ ಸಭೆಯನ್ನು ಉದ್ದೇಶಿಸಿ ಮಾತಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜನಾರ್ದನ ಪೂಜಾರಿ ವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟ ಆಗ್ನೇಸ್ ಮಂಡೋನ್ಸಾ ಪ್ರಸ್ತಾವಿಕದೊಂದಿಗೆ ಸ್ವಾಗತಿಸಿ, ದೈಹಿಕ ಶಿಕ್ಷಕ ಇಂದುಶೇಖರ್ ವಂದಿಸಿ, ಸಹ ಶಿಕ್ಷಕಿ ಸಂಗೀತ ಶರ್ಮಪಿ ಜಿ ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular