ಹೆಬ್ರಿ : ಭಾರತ ಸರ್ಕಾರದ ಇಂಧನ ಸಚಿವಾಲಯ ಆಯೋಜಿಸಿದ ಇಂಧನ ಸಂರಕ್ಷಣೆಯ ಕುರಿತಾದ, ಚಿತ್ರಕಲಾ ಸ್ಪರ್ಧೆಯಲ್ಲಿ ಅಮೃತ ಭಾರತಿ ವಿದ್ಯಾ ಕೇಂದ್ರದ 9 ನೇ ತರಗತಿಯ ವಿದ್ಯಾರ್ಥಿಗಳಾದ ಪ್ರಣವ್ ಡಿ. ಜಿ ಮತ್ತು ಕೃಷ್ಣಪ್ರಸಾದ್ ಭಟ್ ಹಾಗೂ 5 ನೇ ತರಗತಿಯ ವಿದ್ಯಾರ್ಥಿ ಪ್ರಭಾತ್ ಉಡುಪ ವಿಜೇತರಾಗಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ಟ್ರಸ್ಟ್ ನ ಅಧ್ಯಕ್ಷರು, ಕಾರ್ಯದರ್ಶಿಗಳು, ಟ್ರಸ್ಟಿಗಳು, ಸರ್ವ ಸದಸ್ಯರು, ಸಂಸ್ಥೆಯ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯಿನಿ , ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ
Home Uncategorized “ಇಂಧನ ಸಚಿವಾಲಯದ ಚಿತ್ರಕಲಾ ಸ್ಪರ್ಧೆಯಲ್ಲಿ ಹೆಬ್ರಿಯ ಅಮೃತ ಭಾರತಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಮಿಂಚು —...

