ದೇಶದ ಆರ್ಥಿಕ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು : ಕೆ. ವಿಜಯ ಕೊಡವೂರು

0
13

ತೆಂಕನಿಡಿಯೂರು ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

ಉಡುಪಿ : ಭಾರತದ ಆರ್ಥಿಕ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ದೇಶದ ಆರ್ಥಿಕತೆಯ ಬಗ್ಗೆ ಅರಿವು ಬೆಳೆಸಿಕೊಂಡು ಭವಿಷ್ಯದಲ್ಲಿ ದೇಶವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಹೇಳಿದರು.

ಪ್ರಕೋಷ್ಟಗಳ ಸಹಯೋಗ ಮತ್ತು ಆರ್ಥಿಕ ಪ್ರಕೋಷ್ಟ, ಉಡುಪಿ ಜಿಲ್ಲಾ ವತಿಯಿಂದ ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತವು ಜಾಗತಿಕ ಮಟ್ಟದಲ್ಲಿ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದು, ಭವ್ಯ ಭಾರತದ ನಿರ್ಮಾಣದತ್ತ ಮುನ್ನಡೆಯುತ್ತಿದೆ. ಈ ಅಭಿವೃದ್ಧಿಯ ಪಯಣದಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳ ಕೊಡುಗೆ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ. ವಿಜಯ ಕೊಡವೂರು, ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ಸ್ಪಷ್ಟವಾಗಿ ರೂಪಿಸಿಕೊಂಡು ಯಾವುದೇ ಕಾರಣಕ್ಕೂ ದಾರಿ ತಪ್ಪಬಾರದು. ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಹಲವು ದುಷ್ಟಶಕ್ತಿಗಳ ಹಾಗೂ ಹೊರಗಿನ ಹುನ್ನಾರಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಡ್ರಗ್ಸ್‌ನಂತಹ ದುಶ್ಚಟಗಳಿಗೆ ಬಲಿಯಾಗದೆ, ದೇಶಪ್ರೇಮವನ್ನು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಕೆ. ವಿಜಯ ಕೊಡವೂರು, ಉಡುಪಿ ಜಿಲ್ಲಾ ಪ್ರಕೋಷ್ಟಗಳ ಸಹ ಸಂಯೋಜಕರು, ದಿವಾಕರ್ ಶೆಟ್ಟಿ, ಆರ್ಥಿಕ ಪ್ರಕೋಷ್ಟ ಸಂಚಾಲಕರು ಹಾಗೂ ಶಶಾಂಕ್ ಶ್ರೀವತ್ಸಾಯ ಉಪಸ್ಥಿತರಿದ್ದರು.