ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲವಾಗಿ ಮನವಿ ಸಲ್ಲಿಕೆ

0
9

ದಿನಾಂಕ : 12/10/2026 ರಂದು ನಡೆಯಲಿರುವ ಪಂಚ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ, ಬೆಳ್ತಂಗಡಿ ತಾಲೂಕು ಗ್ರಾಮ ಪಂಚಾಯತ್ ನೌಕರರ ವತಿಯಿಂದ ಮಾನ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ನೌಕರರ ಹಕ್ಕುಗಳ ರಕ್ಷಣೆಗಾಗಿ ಹಮ್ಮಿಕೊಳ್ಳಲಾಗಿರುವ ಈ ಮುಷ್ಕರಕ್ಕೆ ಸಂಬಂಧಿಸಿದಂತೆ, ನಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ವಿನಂತಿಸಲಾಯಿತು.

ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದನೆ ದೊರೆಯಬೇಕು ಹಾಗೂ ಬೇಡಿಕೆಗಳು ಈಡೇರುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಶಯದೊಂದಿಗೆ ಈ ಮನವಿ ಸಲ್ಲಿಸಲಾಯಿತು.