ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳ ಭೇಟಿ

0
93


ಉಜಿರೆ: ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.
ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯವರಿಗೆ ಮಾಲಾರ್ಪಣೆ ಮಾಡಿ, ಶಾಲು ಹೊದಿಸಿ, ಫಲಕಾಣಿಕೆ ನೀಡಿ ಗೌರವಿಸಿದರು.
ಸ್ವಾಮೀಜಿಯವರು ಹೆಗ್ಗಡೆಯವರಿಗೆ ಸುಬ್ರಹ್ಮಣ್ಯದ ಪ್ರಸಾದ ನೀಡಿ ಶುಭ ಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಪೂಜ್ಯ ಸ್ವಾಮೀಜಿಯವರ ದೇವರ ದರ್ಶನದ ಬಳಿಕ ಸುಬ್ರಹಣ್ಯಕ್ಕೆ ಮರುಪ್ರಯಾಣ ಮಾಡಿದರು.

LEAVE A REPLY

Please enter your comment!
Please enter your name here