ದೇಶದ ಜನತೆಯೊಂದಿಗೆ ಮಕ್ಕಳನ್ನು ಕೂಡ ತುಂಬಾ ಪ್ರೀತಿಸುತ್ತಿದ್ದ ಪ್ರಧಾನಿ ಜವಾಹರ ಲಾಲ್ ನೆಹರು ಅವರನ್ನು ಮಕ್ಕಳು ಚಾಚಾ ಎಂದು ಕರೆಯುತ್ತಿದ್ದರು. ಮಕ್ಕಳ ಹಕ್ಕನ್ನು ಮತ್ತು ಮಕ್ಕಳ ಜೀವನದ ರೂಪುರೇಷೆಯನ್ನು ನಿರ್ಮಿಸುವಲ್ಲಿ ಇವರ ಪಾತ್ರ ಅತ್ಯಂತ ಹಿರಿದು.
ಅವರ ಜೀವನದ ಆದರ್ಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಜೊತೆಗೆ ಪ್ರಕೃತಿ ಪರಿಸರದ ಬಗ್ಗೆ ಕಾಳಜಿಯನ್ನು ವಹಿಸಿಕೊಂಡು ಶಿಸ್ತಿನ ಜೀವನವನ್ನು ನಡೆಸಿದಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಹಿರಿಯ ರಂಗಕರ್ಮಿ ಚಂದ್ರನಾಥ ಬಜಗೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಇಲ್ಲಿ ನಡೆದ ಮಕ್ಕಳ ದಿನಾಚರಣೆಯ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ಶಶಿಕಲಾ ವಹಿಸಿದ್ದರು. ಸಾಣೂರು ಕ್ಲಸ್ಟರ್ ಸಿ ಆರ್ ಪಿ ಜ್ಯೋತಿ ನಾಯಕ್ , ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಸವಿತಾ ಪ್ರಭು ಸ್ವಾಗತಿಸಿದರು. ಸಹ ಶಿಕ್ಷಕಿ ವಾಣಿ ನಿರೂಪಿಸಿದರು. ಪದವೀಧರ ಸಹ ಶಿಕ್ಷಕಿ ಪ್ರತಿಮಾ ದೇವದಾಸ್ ವಂದಿಸಿದರು.

