ಯಶೋವಿಜಯ: ಬದುಕು-ನೆನಪು-ಸ್ಮರಣೆ

0
70

• ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ವಿದ್ಯಾರ್ಥಿಗಳಿಗೆ ಚೀಲ ಮತ್ತು ಕೊಡೆಗಳನ್ನು ವಿತರಿಸಿ ಶುಭ ಹಾರೈಸಿದರು.
ಕೀರ್ತಿಶೇಷರಾದ ಡಾ. ಬಿ. ಯಶೋವರ್ಮ ಮತ್ತು ವಿಜಯರಾಘವ ಪಡ್ವೆಟ್ನಾಯರ ಸೇವೆ-ಸಾಧನೆ ಸಾರ್ವಕಾಲಿಕ ಮೌಲ್ಯ ಹೊಂದಿದ್ದು ಎಲ್ಲರಿಗೂ ಸ್ಪೂರ್ತಿಯಾಗಿದೆ.
ಉಜಿರೆ: ಕೀರ್ತಿಶೇಷರಾದ ಡಾ. ಬಿ. ಯಶೋವರ್ಮ ಮತ್ತು ವಿಜಯರಾಘವ ಪಡ್ವೆಟ್ನಾಯರ ಸರಳ ಹಾಗೂ ಶಿಸ್ತುಬದ್ಧ ಜೀವನ, ಸೇವೆ-ಸಾಧನೆ ಸಾರ್ವಕಾಲಿಕ ಮೌಲ್ಯ ಹೊಂದಿದ್ದು ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಸೋನಿಯಯಶೋವರ್ಮ ಹೇಳಿದರು.
ಅವರು ಭಾನುವಾರ ಉಜಿರೆಯಲ್ಲಿ  ಕೃಷ್ಣಾನುಗ್ರಹ ಸಭಾಭವನದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಬೆಳ್ತಂಗಡಿ ರೋಟರಿಕ್ಲಬ್, ಎಸ್.ಡಿ.ಎಂ. ಕಾಲೇಜು ರಾಷ್ಟಿçÃಯ ಸೇವಾಯೋಜನೆ ಘಟಕ, ಎಸ್.ಡಿ.ಎಂ. ಕ್ರೀಡಾಸಂಘ ಹಾಗೂ ಸ್ಥಳೀಯ ಸಂಘಟನೆಗಳ ಸಹಯೋಗದಲ್ಲಿ ಯಶೋವಿಜಯ: ಬದುಕು-ನೆನಪು-ಸ್ಮರಣೆ ಕಾರ್ಯಕ್ರಮ ಹಾಗೂ ಸರ್ಕಾರಿ ಶಾಲಾವಿದ್ಯಾರ್ಥಿಗಳಿಗೆ ಚೀಲ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಸ್ತಿನ ಸಿಪಾಯಿಯಾಗಿದ್ದ ಬಿ. ಯಶೋವರ್ಮರು ಪ್ರಾಂಶುಪಾಲರಾಗಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಅನೇಕ ಹೊಸ ಪ್ರಯೋಗಗಳನ್ನು ಅಳವಡಿಸಿ ಯಶಸ್ವಿಯಾದರು. ಅವರು ತೋಟಗಾರಿಕೆ, ಓದುವುದು, ಬರೆಯುವುದು, ಪ್ರಕೃತಿ-ಪರಿಸರ ಸಂರಕ್ಷಣೆ, ಪ್ರವಾಸ ಮೊದಲಾದ ಹಲವು ಹವ್ಯಾಸಗಳನ್ನು ಹೊಂದಿದ್ದರು. ತಾವು ಕಲಿತ, ಓದಿದ ಹೊಸ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುತ್ತಿದ್ದರು.
ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದ ವಿಜಯರಾಘವ ಪಡ್ವೆಟ್ನಾಯರು ಸರಳ ವ್ಯಕ್ತಿತ್ವದ ಸಜ್ಜನರಾಗಿದ್ದು ಎಲ್ಲರನ್ನೂ ಪ್ರೀತಿ-ವಿಶ್ವಾಸದಿಂದ ಕಾಣುತ್ತಿದ್ದರು. ಇಬ್ಬರು ವ್ಯಕ್ತಿಗಳ ಜೀವನ, ಸೇವೆ-ಸಾಧನೆ ಸಾರ್ವಕಾಲಿಕ ಮೌಲ್ಯ ಹೊಂದಿದ್ದು ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಸೋನಿಯಯಶೋವರ್ಮ ಅಭಿಪ್ರಾಯಪಟ್ಟರು.
ಡಾ. ಪ್ರದೀಪ್ ನಾವೂರು, ಬದುಕುಕಟ್ಟೋಣ ತಂಡದಿAದ ಕಲ್ಮಂಜದಲ್ಲಿ ನಿರ್ಮಿಸಿದ ಹೊಸ ಮನೆ “ವಿಜಯ”ದ ಕೀ ಯನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.
ಡಾ. ಬಿ. ಯಶೋವರ್ಮರು ರಚಿಸಿದ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಆರುನೂರಕ್ಕೂ ಮಿಕ್ಕಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಚೀಲ ಮತ್ತು ಕೊಡೆಗಳನ್ನು ವಿತರಿಸಿದ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹನಾಯಕ್, ಬದುಕಿನಲ್ಲಿ ಸಾತ್ವಿಕ ಗುಣಗಳನ್ನು ಅಳವಡಿಸಿಕೊಂಡು ಸಾಧ್ಯವಾದಷ್ಟು ಸೇವಾಕಾರ್ಯ ಮಾಡಿ ಸಮಾಜದ ಋಣ ತೀರಿಸಬೇಕು ಎಂದು ಹೇಳಿದರು.
ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಪೂರನ್‌ವರ್ಮ, ಎಸ್.ಡಿ.ಎಂ. ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾಧಿಕಾರಿ ಪ್ರೊ. ಮಹೇಶ್‌ಕುಮಾರ್ ಶೆಟ್ಟಿ ಶುಭಾಶಂಸನೆ ಮಾಡಿದರು.
ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಸಂದೇಶ್ ರಾವ್, ಶ್ರೀಧರ್ ಕೆ.ವಿ., ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ತುಳುಪುಳೆ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಕೆ. ಉಪಸ್ಥಿತರಿದ್ದರು.
ವಕೀಲ ಧನಂಜಯಕುಮಾರ್ ಅಧ್ಯಕ್ಷತೆ ವಹಿಸಿದರು.
ಮೋಹನ್‌ಕುಮಾರ್ ಸ್ವಾಗತಿಸಿದರು. ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಧನ್ಯವಾದವಿತ್ತರು. ಆರ್.ಜೆ. ಪ್ರಸನ್ನ ಕಾರ್ಯಕ್ರಮ ನಿರ್ವಹಿಸಿದರು.
ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಕೊಡುಗೆಯಾಗಿ ನೀಡಿದ ೩೫೦ ಪುಸ್ತಕಗಳನ್ನು ಕರ್ನೋಡಿ ಸರ್ಕಾರಿ ಶಾಲೆಗೆ ಹಸ್ತಾಂತರಿಸಲಾಯಿತು.

LEAVE A REPLY

Please enter your comment!
Please enter your name here