ಚಿತ್ರದುರ್ಗ: ಸಚಿವ ಜಮೀರ್ ಅಹ್ಮದ್ ಅವರಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಜಿಲ್ಲೆಗೆ ಭೇಟಿ ನೀಡಿದ್ದರು. ಚುನಾವಣಾ ಪ್ರಚಾರದ ವೇಳೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ವೈದ್ಯರು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನಡೆಯುತ್ತಿದೆ.