ವರದಿ ರಾಯಿ ರಾಜ ಕುಮಾರ
ಕನ್ನಡ ನಾಡು-ನುಡಿ ಹಾಗೂ ಶಿಕ್ಷಣದ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ರಾಜ್ಯ ಮಾಧ್ಯಮ ವಕ್ತಾರರಾಗಿ ಹಿರಿಯ ಪತ್ರಕರ್ತ, ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಸುದೇಶ್ ಕುಮಾರ್ ಮಂಗಳೂರು ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.
ಕನ್ನಡ ಮಾಧ್ಯಮ ಶಾಲೆಗಳನ್ನು ಸಬಲೀಕರಣಗೊಳಿಸುವ ಮತ್ತು ಸರ್ಕಾರಿ ಶಾಲೆಗಳ ಹಿತರಕ್ಷಣೆಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಈ ಮಹತ್ವದ ಅಭಿಯಾನಕ್ಕೆ ಮಾಧ್ಯಮಗಳ ಸಹಕಾರ ಮತ್ತು ಸಮರ್ಪಕ ಸಂವಹನದ ಅಗತ್ಯವಿದ್ದು, ಸುದೇಶ್ ಕುಮಾರ್ ಅವರ ಸುದೀರ್ಘ ಪತ್ರಿಕಾ ಅನುಭವವು ಈ ನಿಟ್ಟಿನಲ್ಲಿ ಆನೆಬಲ ತಂದಿದೆ.
ಅವರು ಸಮಾಜಮುಖಿ ಕಳಕಳಿಯ ಬರಹಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಕನ್ನಡ ಶಾಲೆಗಳು ನಮ್ಮ ಸಂಸ್ಕೃತಿಯ ತಾಯಿಬೇರುಗಳು.
.

