ಕಾರ್ಕಳ: ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬೇಡ್ಕರ್ ಭವನದಲ್ಲಿ ವಿವಿಧ ದಲಿತ ಸಂಘಟನೆಗಳ ಸದಸ್ಯರ ಸಭೆ ನಡೆಯಿತು.ಈ ಸಭೆಯಲ್ಲಿ ಸುಧಾಕರ್ ದಾನಶಾಲೆ ಅವರನ್ನು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಅದೇ ರೀತಿ ಹರೀಶ್ ಬಜಗೋಳಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಕೋಶಾಧಿಕಾರಿಯಾಗಿ ಶಶಿಧರ್ ಹವಾಲ್ದಾರ್ ಬೆಟ್ಟು ಆಯ್ಕೆಯಾದರು. ಈ ಸಂದರ್ಭದಲ್ಲಿ ಶ್ರೀನಿವಾಸ್ ಕಾರ್ಲ, ಸುಧಾಕರ್ ನಿಟ್ಟೆ, ಗೋವರ್ಧನ ರಾಣೆ, ಕ್ರಷ್ಣ ಪಳ್ಳಿ, ರಮೇಶ್ ಜರಿಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.

