ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: 8 ಆರೋಪಿಗಳು ಪೊಲೀಸ್ ವಶಕ್ಕೆ

0
1014


ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆಯಲ್ಲಿ ಮಂಗಳೂರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಪೊಲೀಸರೊಂದಿಗೆ ಸಭೆ ನಡೆಸಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಪರಮೇಶ್ವರ್ ಸಭೆ ನಡೆಸಲಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದೆ.

ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಂಟಿ ಸಭೆ ನಡೆಸಲಿದ್ದಾರೆ. ಎಡಿಜಿಪಿ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು, ಎಸ್ಪಿ ಸೇರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ

LEAVE A REPLY

Please enter your comment!
Please enter your name here