ಚಿಕ್ಕಮಗಳೂರು: ಮಂಗಳೂರಿನ ಬಜ್ಪೆಯಲ್ಲಿ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಘಟನೆ ಸಂಬಂಧ ಬಂಧಿತ 8 ಮಂದಿ ಆರೋಪಿಗಳಲ್ಲಿ ಇಬ್ಬರು ಚಿಕ್ಕಮಗಳೂರಿನವರು ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಪೊಲೀಸರು ಹೈಅಲರ್ಟ್ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಪೊಲೀಸರಿಂದ ವಾಹನಗಳ ತಪಾಸಣೆ ಬಿಗಿಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಆಗಮಿಸುತ್ತಿರುವ ವಾಹನಗಳ ತಪಾಸಣೆಯನ್ನು ಬಣಕಲ್ ಠಾಣೆ ಪೊಲೀಸರು ತೀವ್ರಗೊಳಿಸಿದ್ದಾರೆ.