ಈಜು ಸ್ಪರ್ಧೆಯಲ್ಲಿ ಸುಜಾತ ಇವರಿಗೆ ಮೂರು ಚಿನ್ನದ ಪದಕ – ರಾಜ್ಯಮಟ್ಟಕ್ಕೆ ಆಯ್ಕೆ

0
38

ರಾಜ್ಯ ಸರ್ಕಾರಿ ನೌಕರರ ಸಂಘ (ರಿ.) ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಂಗಳೂರು ದಕ್ಷಿಣದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಜಾತ ಅವರು ಈಜು ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸುಜಾತ ಅವರು 100 ಮೀಟರ್ ಬ್ಯಾಕ್ ಸ್ಟ್ರೋಕ್, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್, 50 ಮೀಟರ್ ಬಟರ್ ಫ್ಲೈ ವಿಭಾಗಗಳಲ್ಲಿ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಸತತ ಮೂರು ಚಿನ್ನದ ಪದಕ ಗಳಿಸುವ ಮೂಲಕ ಸುಜಾತ ಅವರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಅವರ ಈ ಸಾಧನೆಗೆ ಸಹೋದ್ಯೋಗಿಗಳು, ಕ್ರೀಡಾಭಿಮಾನಿಗಳು ಹಾಗೂ ಇಲಾಖೆ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here