ಹೆಬ್ರಿ : ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಪ್ರಜಾವಾಣಿ ಪತ್ರಿಕೆಯ ಹೆಬ್ರಿ ವರದಿಗಾರ ಸುಕುಮಾರ್ ಮುನಿಯಾಲ್ ಆಯ್ಕೆಯಾಗಿದ್ದಾರೆ.
2010ರ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಸುಕುಮಾರ್ ಮುನಿಯಾಲ್ ಹೆಬ್ರಿ ಪತ್ರಕರ್ತರ ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಬ್ರಿ ತಾಲ್ಲೂಕು ಘಟಕದ ಪ್ರಥಮ ಅಧ್ಯಕ್ಷರಾಗಿಯೂ ಸೇವೆಸಲ್ಲಿಸುತ್ತಿದ್ದಾರೆ. ಕಳೆದ 25 ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಸೇವೆಯನ್ನು ಸಲ್ಲಿಸಿದ್ದ ಸುಕುಮಾರ್ ಮುನಿಯಾಲ್ ಪ್ರಸ್ತುತ ನಾಡಿನ ಅತ್ಯಂತ ವಿಶ್ವಾಸಾರ್ಹ ದಿನಪತ್ರಿಕೆ ಪ್ರಜಾವಾಣಿಯ ಹೆಬ್ರಿ ವರದಿಗಾರರಾಗಿದ್ದಾರೆ. ಪತ್ರಕರ್ತ ರಾಜೇಶ್ ಶಿಬಾಜೆ ಸಂಸ್ಕರಣಾ ಪ್ರಶಸ್ತಿ, ಡಿವಿಜಿ ಪತ್ರಿಕೋದ್ಯಮ ಪ್ರಶಸ್ತಿ ಸೇರಿ ವಿವಿಧ ಪ್ರಶಸ್ತಿ ಗೌರವಗಳು ಸುಕುಮಾರ್ ಮುನಿಯಾಲ್ ಅವರಿಗೆ ಲಭಿಸಿದೆ. ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಅಧೀನದಲ್ಲಿರುವ ಉಡುಪಿ ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯರಾಗಿ ಜೊತೆಗೆ ಜಿಲ್ಲೆಯ ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.

