ಸುಳ್ಯ: ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡು ಶಾಲೆಗೆ ಹೋಗುತ್ತಿದ್ದ ಬಾಲಕನೊಬ್ಬನ ಗುಪ್ತಾಂಗವನ್ನು ಹಿಡಿದೆಳೆದು ಸಹಪಾಠಿ ವಿದ್ಯಾರ್ಥಿಗಳು ಗಾಯಗೊಳಿಸಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಸಂಪಾಜೆಯ ಆಲಡ್ಕದ ನಿವಾಸಿಯಾಗಿರುವ 12 ವರ್ಷದ ಬಾಲಕನ ಜನನಾಂಗಕ್ಕೆ ಆಂತರಿಕವಾಗಿ ಗಾಯವಾಗಿದೆ. ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಪಾಜೆಯ ಹಾಸ್ಟೆಲ್‌ನಲ್ಲಿದ್ದು ಶಾಲೆಗೆ ಹೋಗುತ್ತಿದ್ದ ಬಾಲಕನ ಜನನಾಂಗವನ್ನು ಇಬ್ಬರು ವಿದ್ಯಾರ್ಥಿಗಳು ಸೆ.14ರಂದು ಹಿಡಿದೆಳೆದು ಗಾಯಗೊಳಿಸಿದ್ದಾರೆ ಎನ್ನಲಾಗಿದೆ. ಬಳಿಕ ವಿದ್ಯಾರ್ಥಿಗೆ ಮೂತ್ರ ವಿಸರ್ಜನೆ ಮಾಡುವಾಗ ವಿಪರೀತ ನೋವು ಕಾಣಿಸಿಕೊಂಡಿದ್ದು, ಮನೆಗೆ ಬಂದು ಹೇಳಿದ್ದಾನೆ. ಮನೆಯವರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ವೈದ್ಯರ ಸಲಹೆಯ ಮೇರೆಗೆ ಬಾಲಕನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ಈಗ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದುಬಂದಿದೆ.