ಅರಂಬೂರಿನಲ್ಲಿ ಯುವಕನೊಬ್ಬ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪದ ಮೇರೆಗೆ ಆತನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ. ಆರೋಪಿ ಅಬ್ದುಲ್ ಬಾಷಿತ್ (19) ಎಂದು ತಿಳಿದು ಬಂದಿದ್ದು, ಸುಳ್ಯ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ನೀಡಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ಪೊಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

