Saturday, December 14, 2024
Homeಅಪಘಾತಸುಳ್ಯ : ಕೆಎಸ್ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಅಕ್ಕ ಸಾವು...

ಸುಳ್ಯ : ಕೆಎಸ್ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಅಕ್ಕ ಸಾವು ತಂಗಿ ಗಂಭೀರ

ಸುಳ್ಯ :ಸುಳ್ಯದ ಪರಿವಾರ ಕಾನ -ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ವಿದ್ಯಾರ್ಥಿನಿ ಸಾವನಪ್ಪಿದ ಘಟನೆ ನ.08 ಶುಕ್ರವಾರ ಸಂಜೆ ಸಂಭವಿಸಿದೆ.

ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಎಂಬವರ ಪುತ್ರಿ ರಚನಾ (20) ಮೃತ ಪಟ್ಟವರು.

ರಚನಾ ಪುತ್ತೂರಿನ ಖಾಸಗಿ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿನಿ, ಎಂದು ಗುರುತಿಸಲಾಗಿದೆ. ಆಕೆಯ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ (16) ಎಂಬವರು ಗಂಭೀರ ಗಾಯಗೊಂಡಿದ್ದಾರೆ.
ರಚನಾ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಸಹೋದರಿ ಅನನ್ಯ ಅವರನ್ನು ಕುಳ್ಳಿರಿಸಿಕೊಂಡು ಸುಳ್ಯದಿಂದ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಸೂಂತೋಡು ಎಂಬಲ್ಲಿ ಡಿಕ್ಕಿಯಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಚನಾ ಅವರು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಸಹ ಸವಾರೆ ಅನನ್ಯ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೊಲೀಸರು ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular