Monday, July 15, 2024
Homeರಾಜ್ಯಎನ್.ಐ.ಟಿ.ಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

ಎನ್.ಐ.ಟಿ.ಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

ಸುರತ್ಕಲ್ : ಎನ್. ಐ . ಟಿ . ಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮನೋವಿಕಸನದ ದೃಷ್ಟಿಯಿಂದ ಎನ್. ಐ .ಟಿ .ಕೆ . ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 1/4/2024 ರಿಂದ 6/4/2024 ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿ ಕೆ .ಆರ್ .ಇ .ಸಿ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ , ಶ್ರೀಮತಿ ಲತಾ , ಶಾಲಾ ಪ್ರಾಂಶುಪಾಲೆ ಶ್ರೀಮತಿ ಪ್ರಮೀಳ ಹಾಗೂ ಹಿರಿಯ ಪ್ರಾಧ್ಯಾಪಕರಾದ ಶ್ರೀ ಸುಬ್ರಮಣ್ಯ ಭಟ್ ದೀಪ ಪ್ರಜ್ವಲನೆ ನೆರವೇರಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಶ್ರೀಮತಿ ಲತಾ ರವರು ಮಕ್ಕಳಿಗೆ ಪ್ರೋತ್ಸಾಹಕ ಮಾತುಗಳನ್ನಾಡುವ ಮೂಲಕ ಕ್ರಿಯಾತ್ಮಕವಾಗಿ ಭಾಗವಹಿಸಲು ಹುರಿದುಂಬಿಸಿದರು . ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸಿಕ್ಕಂತಹ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಕ್ಕಳಲ್ಲಿ ಸೃಜನಾತ್ಮಕ ಪ್ರತಿಭೆಯನ್ನು ಹೊರ ತರುವಲ್ಲಿ ಯಶಸ್ವಿಯಾಗಬೇಕೆಂದು ಮಕ್ಕಳಿಗೆ ಮನವರಿಕೆ ಮಾಡಿದರು . ಸಂಸ್ಕೃತ ವಿದ್ವಾನ್ ಸುಬ್ರಹ್ಮಣ್ಯ ಭಟ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು . ರಸ್ತೆ ಸುರಕ್ಷತೆಯ ಜಾಗೃತಿಯ ಕುರಿತು ಶಾಲಾ ಶಿಕ್ಷಕಿ ಶ್ರೀಮತಿ ಪ್ರಭಾವತಿಯವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿ , ರಸ್ತೆ ನಿಯಮದ ಪ್ರತಿಜ್ಞಾವಿಧಿಯನ್ನು ತೆಗೆದುಕೊಳ್ಳಲಾಯಿತು . ಕಲಾ ಶಿಕ್ಷಕಿ ಶ್ರೀಮತಿ ಗೀತಾ ರವರು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ವನಿತಾ ರವರು ಹಾಗೂ ಚಿತ್ರಕಲಾ ಶಿಕ್ಷಕರಾದ ಶ್ರೀ ಧನಂಜಯ್ . ಬಿ ಅವರು ವಂದನಾರ್ಪಣೆಗೈದರು.

RELATED ARTICLES
- Advertisment -
Google search engine

Most Popular