Thursday, July 25, 2024
Homeಮೂಡುಬಿದಿರೆಪಡುಮಾರ್ನಾಡು | ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ

ಪಡುಮಾರ್ನಾಡು | ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ

ಮೂಡುಬಿದಿರೆ: ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ನಾಲ್ಕು ದಿನಗಳ ಬೇಸಿಗೆ ಶಿಬಿರವನ್ನು ಪಡುಮಾರ್ನಾಡಿನಲ್ಲಿ ಆಯೋಜಿಸಲಾಗಿತ್ತು. ಪಡುಮಾರ್ನಾಡು ಗ್ರಾಮ ಪಂಚಾಯತ್, ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ ಈ ಶಿಬಿರ ಆಯೋಜಿಸಲಾಗಿತ್ತು.

ಪಂಚಾಯತ್ ವತಿಯಿಂದ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಂಥಾಲಯ ಮೇಲ್ವಿಚಾರಕಿ ವನಿತಾ ಮಕ್ಕಳಿಗೆ ಪೇಪರ್ ಬಳಸಿ ಹೂಗಳನ್ನು ರಚಿಸುವುಸು, ಪೇಪರ್ ಲೋಟಗಳನ್ನು ಬಳಸಿ ಆಟದ ವಸ್ತುಗಳ ರಚನೆ ಡ್ರಾಯಿಂಗ್, ಪ್ರಬಂಧ ರಚನೆ ಹಾಗೂ ನೃತ್ಯ ಮುಂತಾದವುಗಳ ತರಬೇತಿ ನೀಡಿದರು.

ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ವೆಂಕಟಾಚಲಪತಿ ರಾಜು ಶಿಬಿರ ಉದ್ಘಾಟಿಸಿ ಚಾಲನೆ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ ಹಾಗೂ ಗ್ರಂಥಾಲಯ ಮೇಲ್ವಿಚಾರಕಿ ವನಿತಾ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular