ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ ಬೇಸಿಗೆ ಶಿಬಿರ : ಆರೋಗ್ಯ ಜಾಗೃತಿ ಕಾರ್ಯಕ್ರಮ

0
73

ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ ಆಯೋಜಿಸಲಾದ ಬೇಸಿಗೆ ಶಿಬಿರವು ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳ ಸರ್ವಾಂಗೀಣ ಬೆಳವಣಿಗೆಯನ್ನು ಉತ್ತೇಜಿಸುತ್ತಿದೆ. ಶಿಬಿರದ ಎರಡನೇ ದಿನವಾದ ಏಪ್ರಿಲ್ 1ರಂದು ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸುರಕ್ಷಾ ದಂತ ಚಿಕಿತ್ಸಾಲಯದ ದಂತ ವೈದ್ಯರು ಹಾಗೂ ದ.ಕ ಜಿಲ್ಲಾ ಗೃಹರಕ್ಷಕ ದಳದ ಮಾಜಿ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಅವರು ಆಗಮಿಸಿ, ತಮ್ಮ ಅನುಭವ ಹಾಗೂ ಜ್ಞಾನವನ್ನು ಮಕ್ಕಳೊಂದಿಗೆ ಹಂಚಿಕೊಂಡರು. ಶಿಬಿರದಲ್ಲಿ ಸುಮಾರು 45ಕ್ಕೂ ಹೆಚ್ಚು ಮಕ್ಕಳು ಹಾಗೂ ಶಾಲೆಯ ಶಿಕ್ಷಕಿಯರು ಸಕ್ರಿಯವಾಗಿ ಭಾಗವಹಿಸಿದ್ದರು.

“ಒರಲ್ ಹೆಲ್ತ್ – ಓವರ್ ಆಲ್ ಹೆಲ್ತ್” ಎಂಬ ವಿಷಯದ ಬಗ್ಗೆ ವಿಸ್ತೃತವಾಗಿ ಮಾತನಾಡಿದ ಡಾ.ಮುರಲೀ ಮೋಹನ್ ಚೂಂತಾರು ಅವರು ಮಕ್ಕಳಿಗೆ ಬಾಯಿಯ ಸ್ವಚ್ಛತೆ, ಹಲ್ಲಿನ ಆರೈಕೆ, ಮತ್ತು ಆರೋಗ್ಯಕರ ಆಹಾರ ಪದ್ಧತಿಯ ಮಹತ್ವದ ಬಗ್ಗೆ ವಿವರಿಸಿದರು. ಹಲ್ಲು ತೊಳೆಯುವ ಸರಿಯಾದ ವಿಧಾನ, ದಂತ ಸಮಸ್ಯೆಗಳನ್ನು ತಪ್ಪಿಸುವ ಮಾರ್ಗಗಳು, ಮತ್ತು ನಿಯಮಿತ ದಂತ ಪರೀಕ್ಷೆಯ ಅಗತ್ಯವನ್ನು ಅವರು ಉದಾಹರಣೆಗಳ ಮೂಲಕ ಸ್ಪಷ್ಟಪಡಿಸಿದರು.

ಮಕ್ಕಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರಿಸಿ, ತಮ್ಮ ಸಂದೇಹಗಳನ್ನು ಕೇಳಿ ಪರಿಹರಿಸಿಕೊಂಡರು. ಉಪನ್ಯಾಸದ ನಂತರ ಮಕ್ಕಳ ಜೊತೆ ಸಂವಾದ ನಡಯಿತು. ಇದರಿಂದ ಮಕ್ಕಳು ವಿಷಯವನ್ನು ಸುಲಭವಾಗಿ ಅರ್ಥಮಾಡಿಕೊಂಡರು.

ಈ ಆರೋಗ್ಯ ಜಾಗೃತಿ ಕಾರ್ಯಕ್ರಮವು ಮಕ್ಕಳಲ್ಲಿ ಉತ್ತಮ ಅಭ್ಯಾಸಗಳನ್ನು ಬೆಳೆಸಲು ಹಾಗೂ ಆರೋಗ್ಯದ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಬಹಳ ಉಪಯುಕ್ತವಾಗಿದ್ದು, ಶಿಬಿರದ ಪ್ರಮುಖ ಆಕರ್ಷಣೆಯಾಗಿ ಪರಿಣಮಿಸಿತು.

ಶಾಲಾ ಸಂಚಾಲಕರಾದ ಈಶ್ವರ ಪ್ರಸಾದ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಮಧುರಾ ಈಶ್ವರ ಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸರಸ್ವತಿ ಉಪಸ್ಥಿತರಿದ್ದರು. ಅಕ್ಷತಾ ಅವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here