ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತಾದ ನಕಲಿ ವಿಡಿಯೋವನ್ನು ಹಂಚಿಕೊಂಡ ಆರೋಪದಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ವಿಷಯಕ್ಕೆ ಸಂಬಂಧಿಸಿ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಎಕ್ಸ್ ನಲ್ಲಿ ನಕಲಿ ವಿಡಿಯೋ ಪೋಸ್ಟ್ ಮಾಡಲಾಗಿದೆ ಎನ್ನಲಾದ ಮೊಬೈಲ್ ಫೋನನ್ನು ಬರುವಾಗ ಜೊತೆಗೆ ತರುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯದ ದೂರಿನ ಮೇರೆಗೆ ದೆಹಲಿ ಪೊಲೀಸರು ರೇವಂತ್ ರೆಡ್ಡಿ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಿದ್ದರು.