Sunday, July 21, 2024
Homeಉಡುಪಿಮಣಿಪಾಲ ಗ್ಯಾಂಗ್ ವಾರ್ | ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಜ್ವಲಂತ ಸಾಕ್ಷಿ: ಸುನಿಲ್ ಕುಮಾರ್

ಮಣಿಪಾಲ ಗ್ಯಾಂಗ್ ವಾರ್ | ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಜ್ವಲಂತ ಸಾಕ್ಷಿ: ಸುನಿಲ್ ಕುಮಾರ್

ಕಾರ್ಕಳ: ಮಣಿಪಾಲದಲ್ಲಿ ನಡೆದ ಗ್ಯಾಂಗ್ ವಾರ್ ಕ್ರಿಮಿನಲ್ ಗಳಿಗೆ ಕಾನೂನಿನ ಭಯವಿಲ್ಲದಂತಾಗಿದೆ ಎಂಬುದಕ್ಕೆ ಜ್ವಲಂತ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.  

“ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ’’ ಎಂದು ಅವರು ಹೇಳಿದ್ದಾರೆ.

“ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು ವಿಜೃಂಭಿಸುವಂತಾಗಿದೆ. ಇದು ಗೃಹ ಇಲಾಖೆ ಹಾಗೂ ಗೃಹ ಸಚಿವರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ’’ ಎಂದು ಅವರು ಆರೋಪಿಸಿದ್ದಾರೆ.

“ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ನಿಮಗೆ ಸ್ವಾಗತ. ಆದರೆ ಇಲ್ಲಿಂದ ಹೊರಡುವುದಕ್ಕೆ ಮೊದಲು ಕೆಲ ಪ್ರಶ್ನೆಗಳಿಗೆ ಉತ್ತರಿಸಿ ಹೋಗಿ. ಕಾನೂನು-ಸುವ್ಯವಸ್ಥೆ ಕಾಪಾಡಲಾರದ ಗೃಹ ಸಚಿವರಿಂದ ಎಂದು ರಾಜೀನಾಮೆ ಪಡೆಯುತ್ತೀರಿ? ಪೊಲೀಸ್ ಠಾಣೆಯನ್ನು ಆಳುವ ಸರ್ಕಾರದ ಆಳಾಗಿಸಿಕೊಂಡಿರುವುದಕ್ಕೆ ಎಂದು ಮುಕ್ತಾಯ ಹಾಡುತ್ತೀರಿ? ಕ್ರಿಮಿನಲ್ ಗಳಿಗೂ ನಿಮ್ಮ ಸರ್ಕಾರಕ್ಕೂ ಒಳ ಒಪ್ಪಂದ ಏರ್ಪಟ್ಟಿದ್ದರೆ ಮಾಸಿಕ ಹಫ್ತಾ ಎಷ್ಟು ನಿಗದಿ ಮಾಡಿದ್ದೀರಿ? ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪೊಲೀಸರ ಕೈ ಕಟ್ಟಿ ಹಾಕಿದ್ದೀರಾ? ಜನರ ಶಾಂತಿ- ನೆಮ್ಮದಿ ಕಾಪಾಡಲಾರದ ಸರ್ಕಾರ ಅಧಿಕಾರದಲ್ಲಿದ್ದು ಪ್ರಯೋಜನವುಂಟೇ ? ಕ್ರಿಮಿನಲ್ ಗಳ ಅಟ್ಟಹಾಸ ನಿಲ್ಲಿಸದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಭಯವೇಕೆ ? ಎಂದು ಅವರು ಸರಣಿ ಪ್ರಶ್ನೆಗಳನ್ನು ಎತ್ತಿದ್ದಾರೆ.

ಸಿದ್ದರಾಮಯ್ಯನವರೇ ನಿಮಗೊಂದು ನೇರ ಸವಾಲು ಈ ಘಟನೆಗೆ ಕಾರಣವಾದ ಗ್ಯಾಂಗ್ ಸ್ಟಾರ್ ಗಳನ್ನು  ಎಷ್ಟು ಗಂಟೆಯೊಳಗೆ ಬಲಿ ಹಾಕುತ್ತೀರಿ ? ಸಣ್ಣ ಕಾರಣಕ್ಕೆ ಶಾಸಕರನ್ನು ಬಂದಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ ? ಎಂದು ಕಿಡಿಗಾರಿದ್ದಾರೆ.

RELATED ARTICLES
- Advertisment -
Google search engine

Most Popular