
ಕಾರ್ಕಳದ ಶ್ರೀ ಗುರುರಾಘವೇಂದ್ರ ಮಠದ ಸಭಾಂಗಣದಲ್ಲಿ, ಅಭಯಹಸ್ತ ಚಾರಿಟಬಲ್ ಟ್ರಸ್ಟ್ ಮತ್ತು ಬ್ರಾಹ್ಮಣ ಸಖ ಬಳಗದ ಸಹಯೋಗದೊಂದಿಗೆ:
ಸಹೃದಯ ದಾನಿಗಳ ನೆರವಿನಿಂದ ಸಂಗ್ರಹಿಸಿದ ₹1,61,500 ಮೊತ್ತವನ್ನು ವಿದ್ಯಾರ್ಥಿ ವೇತನ ಹಾಗೂ ಓರ್ವ ಬಡ ವಿದ್ಯಾರ್ಥಿಗೆ ಲ್ಯಾಪ್‌ಟಾಪ್ ಖರೀದಿಸಲು ವಿತರಿಸಲಾಯಿತು.
ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ತಲಾ ಇಬ್ಬರು ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು.
ಮುಖ್ಯ ಅತಿಥಿಗಳಾಗಿ ಜನಾರ್ದನ ಇಡ್ಯ( ನಿವೃತ್ತ ವಿಜ್ಞಾನಿಗಳು ಇಸ್ರೋ), ಮತ್ತು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಗೌರವ ಅಧ್ಯಕ್ಷ ಸುಧಾಕರ್ ಭಟ್ ಇವರು ಉಪಸ್ತಿತರಿದ್ದರು.
ವರದಿ ರಾಯಿ ರಾಜ ಕುಮಾರ್
