Friday, February 14, 2025
HomeUncategorizedಜಾಮೀನಿನಲ್ಲಿರುವ ದರ್ಶನ್ ಸೇರಿ ಏಳು ಆರೋಪಿಗಳಿಗೆ ನೋಟಿಸ್ ಕೊಟ್ಟ ಸುಪ್ರೀಂ ಕೋರ್ಟ್

ಜಾಮೀನಿನಲ್ಲಿರುವ ದರ್ಶನ್ ಸೇರಿ ಏಳು ಆರೋಪಿಗಳಿಗೆ ನೋಟಿಸ್ ಕೊಟ್ಟ ಸುಪ್ರೀಂ ಕೋರ್ಟ್

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು (ಜನವರಿ 24) ನಡೆದಿದೆ.  ಈ ವೇಳೆ ಸುಪ್ರೀಂಕೋರ್ಟ್ ಏಳು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ರೇಣುಕಾ ಸ್ವಾಮಿ ಕೊಲೆ ಕೇಸ್​ನ ಏಳು ಆರೋಪಿಗಳಿಗೆ ಜಾಮೀನು ನೀಡಿತ್ತು. ಇದನ್ನು ಬೆಂಗಳೂರು ಪೊಲೀಸರು ಸರ್ಕಾರದ ಒಪ್ಪಿಗೆ ಪಡೆದು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದ್ದರು. ಇದರ ವಿಚಾರಣೆ ವೇಳೆ ಸರ್ಕಾರಿ ಪರ ವಕೀಲರು ತಮ್ಮ ವಾದ ಮಂಡಿಸಿದ್ದಾರೆ. ‘ಆರೋಪಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಿ’ ಎಂದು ಮನವಿ ಮಾಡಿದ್ದಾರೆ.

7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ‘ಉಳಿದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೆ ಇದು ಅನ್ವಯಿಸುವುದಿಲ್ಲ. ಹೈಕೋರ್ಟ್ ಫೈಂಡಿಂಗ್ಸ್ ಅನ್ವಯ ಆಗುವುದಿಲ್ಲ’ ಎಂದು ಸುಪ್ರೀಕೋರ್ಟ್ ಅಭಿಪ್ರಾಯಪಟ್ಟಿದೆ. ಸದ್ಯ ವಿಚಾರಣೆಯನ್ನು ಕೋರ್ಟ್ ಮುಂದಕ್ಕೆ ಹಾಕಿದೆ.

ದರ್ಶನ್‌ ಅವರು ಸೆಲೆಬ್ರಿಟಿ ಆಗಿದ್ದು, ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರು ಪ್ರಭಾವ ಬಳಸಿ ಸಾಕ್ಷಿಗಳನ್ನು ತಿರುಚುವ ಸಾಧ್ಯತೆ ಇದೆ ಎಂದು ಪೊಲೀಸರು ಆತಂಕ ಹೊರಹಾಕಿದ್ದಾರೆ. ಇದಲ್ಲದೆ, ಹೈಕೋರ್ಟ್ ಪರಿಗಣಿಸದ ಹಲವು ಅಂಶಗಳನ್ನು ಇದರಲ್ಲಿ ಹೇಳಲಾಗಿದೆ.

ದರ್ಶನ್ ಅವರು ಸದ್ಯ ಜಾಮೀನು ಪಡೆದು ಹೊರಕ್ಕೆ ಬಂದಿದ್ದಾರೆ. ದರ್ಶನ್ ಅವರು ಶೀಘ್ರವೇ ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಒಂದೊಮ್ಮೆ ಅವರ ಜಾಮೀನು ರದ್ದಾದರೆ ಅವರು ಮತ್ತೆ ಜೈಲು  ಸೇರಬೇಕಾಗುತ್ತದೆ.

RELATED ARTICLES
- Advertisment -
Google search engine

Most Popular