Sunday, July 14, 2024
Homeರಾಜ್ಯಅಸಹಜ ಲೈಂಗಿಕ ಕಿರುಕುಳದ ಆರೋಪ: ಸೂರಜ್‌ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ

ಅಸಹಜ ಲೈಂಗಿಕ ಕಿರುಕುಳದ ಆರೋಪ: ಸೂರಜ್‌ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣರನ್ನು ನ್ಯಾಯಾಲಯ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಮಾಜಿ ಸಚಿವ ಎಚ್.ಡಿ. ರೇವಣ್ಣರ ಪುತ್ರ, ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಸಹೋದರ ಸೂರಜ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಕಾಮದ ಆರೋಪದ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. ಅಷ್ಟರಲ್ಲಿ ಭಾನುವಾರ ಸೂರಜ್‌ ಬಂಧನಕ್ಕೊಳಪಟ್ಟಿದ್ದರು.
ಇಂದು ಸೂರಜ್‌ ಅವರನ್ನು ಕೋರ್ಟ್‌ಗೆ ಹಾಜರು ಪಡಿಸಿದಾಗ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯ ಅವರನ್ನು ಎಂಟು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿತು.

RELATED ARTICLES
- Advertisment -
Google search engine

Most Popular