ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ, ಎಂಎಲ್‌ಸಿ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಜು. 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದರು. ಈ ಆದೇಶದಂತೆ ಸೂರಜ್ ಮತ್ತೆ ಜೈಲಿನಲ್ಲಿ ದಿನ ಕಳೆಯಬೇಕಿದೆ.
ಸೂರಜ್ ರೇವಣ್ಣ ಪರ ವಕೀಲರು, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ನ್ಯಾಯಾಧೀಶರು ಸೂಚಿಸಿದ್ದಾರೆ. ಹೀಗಾಗಿ ನಾಳೆ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.