ಸುರತ್ಕಲ್ : 10ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು

0
74

ಸುರತ್ಕಲ್ : ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಸೂರಿಂಜೆ ಗ್ರಾಮದಲ್ಲಿ ಕ್ರೀಡಾಂಗಣದಲ್ಲಿ ಆಟವಾಡುತ್ತಿದ್ದ ವೇಳೆ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಸೂರಿಂಜೆ ಕೋಟೆ ಬೋಳ್ಳಾರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದ್ದು, ಅವರು ಮಾಧವ ಅಮೀನ್ ಅವರ ಪುತ್ರರಾಗಿದ್ದಾರೆ.

ಗುರುವಾರ ಆಟವಾಡುತ್ತಿದ್ದ ವೇಳೆ ಲಿಖಿತ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದವರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಘಟನೆಯಿಂದ ಕುಟುಂಬಸ್ಥರು, ಸಹಪಾಠಿಗಳು, ಶಿಕ್ಷಕರು ಹಾಗೂ ಗ್ರಾಮಸ್ಥರು ತೀವ್ರ ದುಃಖಕ್ಕೊಳಗಾಗಿದ್ದಾರೆ. ವಿದ್ಯಾರ್ಥಿಯ ಅಕಾಲಿಕ ನಿಧನವು ಶಾಲಾ ವಲಯದಲ್ಲಿ ಶೋಕದ ಛಾಯೆ ಮೂಡಿಸಿದೆ.

ವಿದ್ಯಾರ್ಥಿ ಏಕಾಏಕಿ ಕುಸಿದು ಬಿದ್ದ ನಿಖರ ಕಾರಣ ವೈದ್ಯಕೀಯ ಪರೀಕ್ಷೆಯ ಬಳಿಕ ತಿಳಿದುಬರಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ.