ಆ.30 ನೇ ಶುಕ್ರವಾರ ದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮಂಗಳೂರು ಉತ್ತರ ವಲಯ ಹಾಗೂ ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಅನುದಾನಿತ ಶ್ರೀ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ ಮೈರ್ಪಾಡಿ ಕುಳಾಯಿ ಇದರ ಜಂಟಿ ಆಶ್ರಯದಲ್ಲಿ ಸುರತ್ಕಲ್ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವು ಜರುಗಿತು. ದೀಪ ಪ್ರಜ್ವಲಿಸುವುದರೊಂದಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಹೆಚ್.ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸ್ಥಳೀಯ ಕಾರ್ಪೊರೇಟರ್ ವೇದಾವತಿ, ಹಿಂದು ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಶ್ರೀರಂಗ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಭರತ್, ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿನಯ ಆಚಾರ್, ಶಾಲಾ ಸಂಚಾಲಕಿ ಕೆ ಕಲಾವತಿ, ಸಿ.ಆರ್.ಪಿ. ಹೇಮಲತಾ, ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷರಾದ ಪ್ರವೀಣ್, ನಿವೃತ್ತ ಶಿಕ್ಷಕ ಶ್ರೀಧರ್ ಭಟ್, ಅನುದಾನಿತ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಅಂಬರೀಷ್, ಸರಕಾರಿ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಜಯರಾಮ, ಮುಖ್ಯೋಪಾಧ್ಯಾಯರಾದ ಗೋಪಾಲ್.ವಿ, ದೈಹಿಕ ಶಿಕ್ಷಣ ಶಿಕ್ಷಕರ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನೋದ್, ಭಾಗವಹಿಸಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷರಾದ ಜಯಚಂದ್ರ ಹತ್ವಾರ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಸಮೂಹ ಸಂಪನ್ಮೂಲ ವ್ಯಕ್ತಿ ರಾಮದಾಸ್, ಅಂಗರಗುಂಡಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಹೇಮಲತಾ, ಸಂಚಾಲಕಿ ಕೆ ಕಲಾವತಿ, ಮುಖ್ಯೋಪಾಧ್ಯಾಯರಾದ ಗೋಪಾಲ್.ವಿ, ಭಾಗವಹಿಸಿದ್ದರು. ಪಂದ್ಯಾಟದಲ್ಲಿ ವಿಜೇತರಾದ ತಂಡಗಳಿಗೆ ಅಧ್ಯಕ್ಷರು ಮತ್ತು ಅತಿಥಿಗಳು ಬಹುಮಾನಗಳನ್ನು ವಿತರಿಸಿದರು. ಒಟ್ಟು18 ಬಾಲಕರ ತಂಡ, 6ಬಾಲಕಿಯರ ತಂಡಗಳು ಭಾಗವಹಿಸಿದ್ದವು. ತೀರ್ಪುಗಾರರಾಗಿ ದೈಹಿಕ ಶಿಕ್ಷಕರು ಸಹಕರಿಸಿದರು.ಮುಖ್ಯೋಪಾಧ್ಯಾಯರು ಎಲ್ಲರನ್ನು ಸ್ವಾಗತಿಸಿದರು. ಸಹಶಿಕ್ಷಕರಾದ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.ಸಹಶಿಕ್ಷಕ ಮಲಕಪ್ಪರವರು ಧನ್ಯವಾದ ಗೈದರು.