ಸುರತ್ಕಲ್: ಧಾರ್ಮಿಕ ಕಾರ್ಯಕ್ರಮಗಳಿಂದ ಜನರ ಮನಸ್ಸಿಗೆ ನೆಮ್ಮದಿ ಜೊತೆಗೆ ಜಾಗೃತಿ ಸಾಧ್ಯ ಎಂದು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಅವರು ಸುರತ್ಕಲ್ ಸಮೀಪದ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಚಿತ್ರಾಪುರ ಮಠದ ಶ್ರೀ ವಿಧ್ಯೇಂದ್ರ ತೀರ್ಥ ಶ್ರೀಪಾದರನ್ನು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ವತಿಯಿಂದ ಗೌರವಿಸಿ ಮಾತನಾಡಿದರು
ಇದೇ ಸಂದರ್ಭದಲ್ಲಿ ಶ್ರೀಪಾದರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ರವರನ್ನು ದೇವಸ್ಥಾನದ ವತಿಯಿಂದ ಸಮ್ಮಾನಿಸಿದರು.ಈ ಸಂದರ್ಭ ದೇವಸ್ಥಾನದ ಕಾರ್ತಿಕ್ ಭಟ್, ಮುಲ್ಕಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.