ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಸಂಘಟನಾತ್ಮಕ ಚಟುವಟಿಕೆ: ಪ್ರಿಯಾ ಗಿರೀಶ್ ಶೆಟ್ಟಿ
ಸುರತ್ಕಲ್: ಸಂಘಟನಾತ್ಮಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುವುದರ ಮೂಲಕ ಸಮಾಜ ಬಲಿಷ್ಠವಾಗಲು ಸಾಧ್ಯ ಎಂದು ಶ್ರೀಮತಿ ಪ್ರಿಯಾ ಗಿರೀಶ್ ಶೆಟ್ಟಿ ಕಟೀಲು ನುಡಿದರು. ಅವರು ಸುರತ್ಕಲ್ ಬಂಟರ ಭವನದಲ್ಲಿ ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ವತಿಯಿಂದ ಜಯಲಕ್ಷ್ಮಿ ಸಿಲ್ಕ್ ಉದ್ಯಾವರ ಉಡುಪಿ ವತಿಯಿಂದ ನಡೆದ ಸಾರಿ ಮೇಳದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಬಂಟರ ಸಂಘವು ಹಲವಾರು ಜನಪರ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಇತರ ಸಂಘಗಳಿಗೆ ಮಾದರಿಯಾಗಿದೆ ಎಂದರು.
ವೇದಿಕೆಯಲ್ಲಿ ಮಹಿಳಾ ವೇದಿಕೆ ಅಧ್ಯಕ್ಷೆ ಭವ್ಯಾ ಶೆಟ್ಟಿ, ನಿಕಟಪೂರ್ವ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಉಪಾಧ್ಯಕ್ಷ ಪುಷ್ಷರಾಜ್ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ನಿಕಟಪೂರ್ವಧ್ಯಕ್ಷ ಸುಧಾಕರ ಪೂಂಜ, ಮಾಜಿ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ಮಹಿಳಾ ವೇದಿಕೆಯ ಮಾಜಿ ಅಧ್ಯೆಕ್ಷರಾದ ಬೇಬಿ ಶೆಟ್ಟಿ, ಚಂದ್ರ ಕಲಾ ಶೆಟ್ಟಿ, ಉಪಾಧ್ಯಕ್ಷೆ ಸರೋಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಜಾತ ಶೆಟ್ಟಿ ಕೃಷ್ಣಾಪುರ, ಕೋಶಾಧಿಕಾರಿ ಜ್ಯೋತಿ ಪ್ರವೀಣ್ ಶೆಟ್ಟಿ, ಜತೆ ಕಾರ್ಯಾದರ್ಶಿ ವಜ್ರಾಕ್ಷಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸುಜಾತ ಶೆಟ್ಟಿ ಕಾಟಿಪಳ್ಳ, ಸಂಘಟನಾ ಕಾರ್ಯದರ್ಶಿ ನಾಗಲತಾ ಶೆಟ್ಟಿ ತೋಕೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜೇಶ್ವರಿ ಡಿ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.