ಮಂಗಳೂರು ತಾಲೂಕಿನ ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಯ ಆಯ್ದ ಭಾಗಗಳು ಹಾಳಾಗಿರುವ ಕಾರಣ ಅದರ ಅಭಿವೃದ್ಧಿ ಕಾಮಗಾರಿಯನ್ನು ಪ್ರಾರಂಭಿಸಲಾಯಿತು.

ಶಾಸಕ ಉಮಾನಾಥ ಕೋಟ್ಯಾನ್ ಅವರು ಹಾಳಾದ ಭಾಗದ ರಸ್ತೆಯ ಅಭಿವೃದ್ಧಿಯ ಕಾಮಗಾರಿಗೆ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಖಂಡರುಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಈ ಕಾಮಗಾರಿ ಲೋಕೋಪಯೋಗಿ ಇಲಾಖೆಯ ಸುಮಾರು ಒಂದು ಕೋಟಿ 50 ಲಕ್ಷ ರೂಪಾಯಿಯಲ್ಲಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ವರದಿ ರಾಯಿ ರಾಜ ಕುಮಾರ